ಕರಾವಳಿ
ಉಪ್ಪಿನಂಗಡಿ: ಮಹಿಳೆ ಸಾವು; ಕೊಲೆ ಶಂಕೆ!

Views: 171
ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ಮಹಿಳೆ ಇಲ್ಲಿನ ನಿವಾಸಿ ಹೇಮಾವತಿ (37 ) ಅವರು ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಪೊಲೀಸರು ವಿಚಾರಣೆಗಾಗಿ ಮೃತರ ಅಕ್ಕನ ಮಗ ಎಸೆಸೆಲ್ಸಿ ಓದುತ್ತಿರುವ ಬಾಲಕನನ್ನು, ಆತನ ತಂದೆ ಶಂಕರ ಎಂಬವರನ್ನು ಹೆಚ್ಚಿನ ವಿಚಾರಣೆಗೆ ಕರೆದೊಯ್ದಿದ್ದಾರೆ.






