ಕ್ರೀಡೆ

ಉಪ್ಪಿನಕುದ್ರು ಸರಕಾರಿ ಪ್ರೌಢಶಾಲೆ: ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Views: 150

ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹೆಮ್ಮಾಡಿ ಹೋಬಳಿ ಮಟ್ಟದ 14ರ ವಯೋಮಾನದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕ ಮತ್ತು ಬಾಲಕಿಯರ ಎರಡೂ ವಿಭಾಗದಲ್ಲಿ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನಿಯಾಗಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಸವಿತಾ ಜಿ, ದೈಹಿಕ ಶಿಕ್ಷಣ ಶಿಕ್ಷಕ ರಂಜಿತ್ ಶೆಟ್ಟಿ ಹಾಗೂ ಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ ಹಾಗೂ ಶಾಲಾ ಪೋಷಕರು ಶುಭ ಹಾರೈಸಿದ್ದಾರೆ.

Related Articles

Back to top button