ಕ್ರೀಡೆ
ಉಪ್ಪಿನಕುದ್ರು ಸರಕಾರಿ ಪ್ರೌಢಶಾಲೆ: ಹೋಬಳಿ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಜಯಭೇರಿ
Views: 269
ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರಕಾರಿ ಪ್ರೌಢಶಾಲೆ ಗುಜ್ಜಾಡಿ ಇವರು ಜಂಟಿಯಾಗಿ ಆಯೋಜಿಸಿದ ಹೆಮ್ಮಾಡಿ ಹೋಬಳಿ ಮಟ್ಟದ 17ರ ವಯೋಮಿತಿಯ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರುವಿನ ಬಾಲಕ ಹಾಗೂ ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಗ್ರಾಮೀಣ ಪ್ರದೇಶದ ಅತ್ಯಂತ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳಿದ್ದರೂ ಸಹ ಅದನ್ನೆಲ್ಲ ಮೀರಿ ನಿಂತು ಈ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಮತ್ತು ತರಬೇತಿಗೊಳಿಸಿದ ದೈಹಿಕ ಶಿಕ್ಷಕರನ್ನು ಪ್ರೋತ್ಸಾಹ ನೀಡಿದ ಶಾಲಾ ಮುಖ್ಯೋಪಾದ್ಯಾಯರು ಮತ್ತು ಶಿಕ್ಷಕ ವೃಂದದವರನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು,ಪೋಷಕರು ಮತ್ತು ಊರಿನವರು ಅಭಿನಂದಿಸಿದ್ದಾರೆ.







