ಶಿಕ್ಷಣ

ಉಪ್ಪಿನಕುದ್ರು ಸರಕಾರಿ ಪ್ರೌಢಶಾಲೆ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ: ದಾಖಲೆಯೊಂದಿಗೆ ತಾಲೂಕು ಮಟ್ಟಕ್ಕೆ ಆಯ್ಕೆ 

Views: 0

ಕನ್ನಡ ಕರಾವಳಿ ಸುದ್ದಿ: ಹೋಬಳಿ ಮಟ್ಟದ 14 ಮತ್ತು 17 ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಎಲ್ಲಾ 4 ತಂಡಗಳು ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ದೊಂದಿಗೆ ತಾಲೂಕು ಮಟ್ಟಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಕೋಣೆ ಇವರು ಜಂಟಿಯಾಗಿ ಆಯೋಜಿಸಿದ ಹೆಮ್ಮಾಡಿ ಹೋಬಳಿ ಮಟ್ಟದ 14 ವಯೋಮಿತಿಯ ವಾಲಿಬಾಲ್ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಉಪ್ಪಿನಕುದ್ರುವಿನ ಬಾಲಕ ಹಾಗೂ ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆಯುವುದರೊಂದಿಗೆ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ಮೂಲಕ ಶಾಲೆಯ 14 ವಯೋಮಿತಿಯ ಬಾಲಕ ಬಾಲಕಿಯರು ಹಾಗೂ 17 ವಯೋಮಿತಿ ಯ ಬಾಲಕ ಬಾಲಕಿಯರು ಒಟ್ಟು ನಾಲ್ಕೂ ತಂಡಗಳು ಪ್ರಥಮ ಸ್ಥಾನ ಪಡೆಯುವ ಮೂಲಕ ದಾಖಲೆ ಮಾಡಿರುತ್ತಾರೆ.ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳಿದ್ದರೂ ಸಹ ಅದನ್ನೆಲ್ಲ ಮೀರಿ ನಿಂತು ಈ ಅತ್ಯುತ್ತಮ ಸಾಧನೆಗೆ ಕಾರಣಕರ್ತರಾದ ವಿದ್ಯಾರ್ಥಿಗಳನ್ನು,ತರಭೇತಿ ನೀಡಿದ ದೈಹಿಕ ಶಿಕ್ಷಕರನ್ನು,ಪ್ರೋತ್ಸಾಹ ನೀಡಿದ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರನ್ನು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಊರಿನವರು ಅಭಿನಂದಿಸಿದ್ದಾರೆ.

Related Articles

Back to top button
error: Content is protected !!