ಕರಾವಳಿ

ಉಪ್ಪುಂದದಲ್ಲಿ ಮತ್ತೆ ದೋಣಿ  ಅವಘಡ  : 9 ಮೀನುಗಾರರು ಪಾರು

Views: 0

ಬೈಂದೂರು ತಾಲೂಕಿನ ಉಪ್ಪುಂದದ ಕೊಡೇರಿ ಎಂಬಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿ ಮುಗುಚಿ ಬಿದ್ದು ದುರ್ಘಟನೆ ಸಂಭವಿಸಿದೆ.

ಶುಕ್ರವಾರ ಮೀನುಗಾರಿಕೆಗೆ ತೆರಳಿದ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಕೊಡೇರಿ ಸಮುದ್ರ ತೀರದಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿದೆ. ತಕ್ಷಣ ಇತರೆ ದೋಣಿಗಳ ಸಹಾಯದಿಂದ ಎಲ್ಲಾ 9 ಮೀನುಗಾರರನ್ನು ಪಾರು ಮಾಡಲಾಗಿದೆ ಎಂದು ತಿಳಿದುಬಂದಿದೆ

Related Articles

Back to top button