ಜನಮನ
ಉಪ್ಪುಂದ ಮೀನುಗಾರಿಕೆ ದೋಣಿ ದುರಂತ: ಓರ್ವ ಸಾವು, ಇನ್ನೊಬ್ಬ ನಾಪತ್ತೆ

Views: 0
ಬೈಂದೂರು ತಾಲೂಕಿನ ಉಪ್ಪುಂದದ ಸಚಿನ್ ಮಾಲೀಕತ್ವದ ದೋಣಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಡೆಯಾಗಿ ಓರ್ವ ಸಾವನಪ್ಪಿದ್ದು, ನಾಪತ್ತೆಯಾದ ವ್ಯಕ್ತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ದೋಣಿಯಲ್ಲಿ ಒಟ್ಟು ಎಂಟು ಮಂದಿ ಮೀನುಗಾರಿಕೆಗೆ ತೆರಳಿದ್ದಾರೆ. ಸಮುದ್ರಗಳ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮುಳುಗಡೆಯಾಗಿದೆ. ಉಳಿದವರು ಈಜಿ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ತಹಸೀಲ್ದಾರ್ ಶ್ರೀಕಾಂತ್ ಹೆಗಡೆ, ಬೈಂದೂರ್ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಣಿ, ಅಗ್ನಿಶಾಮಕ ದಳ, ರಕ್ಷಣಾ ಸಿಬ್ಬಂದಿಗಳು, ಸ್ಥಳೀಯರು ಹಾಜರಿದ್ದರು.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






