ಯುವಜನ

ಉಳ್ಳಾಲದ ಸೋಮೇಶ್ವರ ಬೀಚ್‌ಗೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ..!

Views: 149

ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸೋಮೇಶ್ವರ ಬೀಚ್ ಗೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪೋಕ್ಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿದೆ.

ಅಡ್ಯಾರ್ ವಳಚ್ಚಿಲ್ ನಿವಾಸಿ ಪೇಂಟಿಂಗ್ ವೃತ್ತಿ ಮಾಡಿಕೊಂಡಿರುವ ಕೆಲ್ವಿನ್ (24) ಬಂಧಿತ ಆರೋಪಿ. ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡ ಯುವಕ ಐದು ದಿನದಲ್ಲೇ ಆಕೆಯನ್ನು ಪುಸಲಾಯಿಸಿ ಬೀಚ್ ಗೆ ಕಾರ್‌ನಲ್ಲಿ ಕರೆದುಕೊಂಡು ಹೋಗಿದ್ದು, ಬಳಿಕ ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ.

ಪಿಯುಸಿ ಮುಗಿಸಿ ನರ್ಸಿಂಗ್ ಶಿಕ್ಷಣ ಓದಲು ಮುಂದಾಗಿರುವ ಸಂತ್ರಸ್ತೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿಕೊಂಡಿದ್ದ ಆರೋಪಿ 5 ದಿನದಲ್ಲೇ ಭೇಟಿಯಾಗಲು ಉಳ್ಳಾಲದ ಮನೆಗೆ ಕಾರಿನಲ್ಲಿ ಕರೆದೊಯ್ದಿದ್ದ.

ನಂತರ ಆಕೆಯನ್ನು ಕುತ್ತಾರು ಸಮೀಪದ ಲಾಡ್ಜ್ ಗೆ ಕರೆದುಕೊಂಡು ಹೋಗಿ ರೂಂ ಕೇಳಿದ್ದಾನೆ. ಆದರೆ, ಬಾಲಕಿಯಾಗಿದ್ದ ಕಾರಣ ಲಾಡ್ಜ್ ಸಿಬ್ಬಂದಿ ರೂಂಮ್ ನೀಡಿರಲಿಲ್ಲ. ನಂತರ ಸೋಮೇಶ್ವರ ಕಡಲ ತೀರಕ್ಕೆ ಕರೆದೊಯ್ದು ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯನ್ನು ಮನೆಯವರೆಗೂ ಕಾರ್ ನಲ್ಲಿ ಕರೆದುಕೊಂಡು ಬಂದು ಬಿಟ್ಟು ಹೋಗಿದ್ದಾನೆ. ರಾತ್ರಿ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ವೈದ್ಯರ ಬಳಿ ಕರೆದೊಯ್ದು ತೋರಿಸಿದಾಗ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ.

 

Related Articles

Back to top button