ಇತರೆ

ಎರಡು ಕಾರುಗಳ ನಡುವೆ ಭೀಕರ ಅಪಘಾತ: ಐವರು ಸಾವು 

Views: 146

ತುಮಕೂರು: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಹಾಗೂ ಕಾಟಗಾನಹಟ್ಟಿ ಬಳಿ ಭಾನುವಾರ ಸಂಜೆ ಸಂಭವಿಸಿದೆ.

ಘಟನೆಯಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಅಲ್ಲದೆ, ಮಹಿಳೆ ಮತ್ತು ಬಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಇದರಲ್ಲಿ, ಯೋಗೇಶ್ ಪುತ್ರ ಸಿಂಧು (12) ಎಂಬ ಬಾಲಕನ ಗುರುತು ಮಾತ್ರ ಪತ್ತೆಯಾಗಿದೆ.

ಮಾರುತಿ ಸಿಯಾಜ್ ಕಾರು ತುಮಕೂರು ಕಡೆಯಿಂದ ಬರುತ್ತಿದ್ದರೆ, ಟಾಟಾ ಟಿಯಾಗೋ ಮಧುಗಿರಿ ಕಡೆಯಿಂದ ತುಮಕೂರು ಕಡೆ ಹೋಗುತ್ತಿತ್ತು. ಸಿಯಾಜ್ ಕಾರಿನಲ್ಲಿ ಯೋಗೇಶ್ ಎಂಬವರ ಕುಟುಂಬಸ್ಥರು, ಊರಿನಲ್ಲಿ ಹಬ್ಬ ಮುಗಿಸಿಕೊಂಡು ವೈ‌.ಎನ್. ಹೊಸಕೋಟೆ ಕಡೆಯಿಂದ ಬೆಂಗಳೂರಿಗೆ ಹೊರಟಿದ್ದರು. ಈ ಕುಟುಂಬ ಬೆಂಗಳೂರಿನ ಜೆ.ಪಿ. ನಗರದಲ್ಲಿ ವಾಸವಾಗಿತ್ತು.

ಡಿಕ್ಕಿ ರಭಸಕ್ಕೆ ಎರಡೂ ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಟಿಯಾಗೋ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ. ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ

Related Articles

Back to top button
error: Content is protected !!