ಇತರೆ

ಎರಡು ದಿನದ ಹಸುಗೂಸು ಮಾರಾಟ: ತಂದೆ ತಾಯಿ, ನರ್ಸ್ ಅರೆಸ್ಟ್ 

Views: 84

ಕನ್ನಡ ಕರಾವಳಿ ಸುದ್ದಿ: ಚಿಕ್ಕಮಗಳೂರಿನ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾದ ಎರಡು ದಿನದ ಹೆಣ್ಣು ಮಗುವನ್ನು 1 ಲಕ್ಷಕ್ಕೆ ಮಾರಾಟ ಮಾಡಿದ್ದ ದಂಪತಿ ಮತ್ತು ನಿವೃತ್ತ ನರ್ಸ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಹರಾವರಿ ಗ್ರಾಮದ ಕೋಣನಗುಡ್ಡದ ರತ್ನಾ ಎಂಬುವರನ್ನು ಹೆರಿಗೆಗಾಗಿ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ. 22 ರಂದು ಹೆಣ್ಣು ಮಗುವಿನ ಜನ್ಮ ನೀಡಿದ್ದರು. ಮಗು ಹುಟ್ಟಿದ ಎರಡೇ ದಿನಕ್ಕೆ ರತ್ನಾ ಕೊಪ್ಪದ ನಿವೃತ್ತ ನರ್ಸ್ ಕುಸುಮ ಎಂಬುವರ ಮೂಲಕ 1 ಲಕ್ಷ ರೂಪಾಯಿಗೆ ಕಾರ್ಕಳದ ರಾಘವೇಂದ್ರ ಅವರಿಗೆ ಮಾರಾಟ ಮಾಡಿದ್ದಾರೆ.

ಎರಡು ದಿನದ ಹಸುಗೂಸು ಮಾರಾಟದ ವಿಚಾರ ತಿಳಿದ ಎನ್.ಆರ್ ಪುರ ಠಾಣೆಯ ಪಿಎಸ್ಐ ನಿರಂಜನಗೌಡ ಹಾಗೂ ಸಿಬ್ಬಂದಿಗಳು ತನಿಖೆ ನಡೆಸಿ, ಪ್ರಕರಣ ಭೇದಿಸಿದರು. ಬಳಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಕಾರ್ಕಳಕ್ಕೆ ತೆರಳಿ ಮಗುವನ್ನು ಸುರಕ್ಷಿತವಾಗಿ ತಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾರೆ. ಇನ್ನು, ಮಗು ದತ್ತು ಪಡೆದ ರಾಘವೇಂದ್ರ, ನಿವೃತ್ತ ನರ್ಸ್‌ ಕುಸುಮ ಅವರ ಸಹೋದರ. ತಮಗೆ ಮಕ್ಕಳು ಇಲ್ಲದೆ ಇರುವುದರಿಂದ ಸಾಕಲು ಮಗು ಪಡೆದಿದ್ದೇನೆ ಎಂದು ರಾಘವೇಂದ್ರ ಪೊಲೀಸರ ಮುಂದೆ ಹೇಳಿದ್ದಾರೆ.

 

 

Related Articles

Back to top button