ಇತರೆ

ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು, ಆತ್ಮಹತ್ಯೆ ಮಾಡಿಕೊಂಡ ತಾಯಿ

Views: 142

ಶಿವಮೊಗ್ಗ: ತಾಯಿಯೊಬ್ಬಳು ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯ ಚಂಪಕಾಪುರದಲ್ಲಿ ನಡೆದಿದೆ.

ಚಂಪಕಾಪುರ ನಿವಾಸಿ ರಾಜೇಶ್ ಎಂಬುವವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ (12), ಸಂಪದ (6) ಮೃತ ದುರ್ದೈವಿಗಳು. ನಿನ್ನೆ ರಾತ್ರಿ ಎರಡು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ತಾನು ಕೂಡ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ.

ಘಟನಾ ಸ್ಥಳಕ್ಕೆ ನಗರ ಠಾಣೆ ಪಿಎಸ್ಐ ರಮೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾವಿಯಿಂದ ಮೃತದೇಹಗಳನ್ನು ಎತ್ತಿ ನಗರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಇಂದು ಮರಣೋತ್ತರ ಪರೀಕ್ಷೆ ನಡೆಯಲಿದೆ.

ಇನ್ನು ಈ ಘಟನೆಯಿಂದ ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.

Related Articles

Back to top button
error: Content is protected !!