ಇತರೆ
ಎರಡು ಮರಗಳ ಮಧ್ಯೆ ಸಿಲುಕಿ ನಜ್ಜುಗುಜ್ಜಾದ ಕಾರು, ಇಬ್ಬರ ಸಾವು, ಒಬ್ಬ ಗಂಭೀರ
Views: 60
ಕನ್ನಡ ಕರಾವಳಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಕರ್ಕಾ ಕ್ರಾಸ್–ಅಜಗಾಂವ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಎಂದು ಗುರುತಿಸಲಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಎರಡು ಮರಗಳ ಮಧ್ಯೆ ಸಿಲುಕಿದೆ. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚಾಲಕನ ಗುರುತು ಪತ್ತೆಯಾಗಿಲ್ಲ. ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ಮೂರು ಜನರು ಪ್ರಯಾಣಿಸುತ್ತಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ದಾಂಡೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಮೃತದೇಹಗಳನ್ನು ಹಳಿಯಾಳದ ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ.






