ಜನಮನ

ಎಲ್‌ಪಿಜಿ ಕೊರತೆ ಭೀತಿಗೆ ತಾತ್ಕಾಲಿಕ ರಿಲೀಫ್: ಮಂಗಳೂರಿನಲ್ಲಿ ಇಂದು 26 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಅನ್‌ಲೋಡ್

ಭಾರತಕ್ಕೆ ಆಗಮಿಸಿದ ತೈಲ ಹಡಗು ಮಂಗಳೂರಿನಲ್ಲಿ ಎಲ್‌ಪಿಜಿ ಅನ್‌ಲೋಡ್

Views: 35

ಕನ್ನಡ ಕರಾವಳಿ ಸುದ್ದಿ: ಮಾರ್ಚ್ 12ರಂದು ಕಚ್ಚಾ ತೈಲ ಹೊತ್ತ ಮೊದಲ ಹಡಗು ಮುಂಬೈ ತಲುಪಿತ್ತು. ನಂತರ ಮಾರ್ಚ್ 16ರಂದು ಎಲ್‌ಪಿಜಿ ಸಾಗಿಸುತ್ತಿದ್ದ ‘ಶಿವಾಲಿಕ್’ ಹಡಗು ಗುಜರಾತ್‌ನ ಮುಂದ್ರಾ ಬಂದರಿಗೆ ಆಗಮಿಸಿತು. ಈ ಹಡಗಿನಲ್ಲಿ ಒಟ್ಟು 46 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ಅದರಲ್ಲಿ ಸುಮಾರು 20 ಸಾವಿರ ಮೆಟ್ರಿಕ್ ಟನ್ ಅನ್ನು ಮುಂದ್ರಾ ಬಂದರಿನಲ್ಲಿ ಅನ್‌ಲೋಡ್ ಮಾಡಲಾಗಿದೆ.

ಉಳಿದ 26 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿಯನ್ನು ಇಂದೇ ಮಂಗಳೂರು ಬಂದರಿಗೆ ತಂದು ಅನ್‌ಲೋಡ್ ಮಾಡುವ ಸಾಧ್ಯತೆ ಇದೆ. ಇದರಿಂದ ದೇಶದಲ್ಲಿ ಉಂಟಾಗಿದ್ದ ಎಲ್‌ಪಿಜಿ ಕೊರತೆ ಭೀತಿಗೆ ತಾತ್ಕಾಲಿಕ ರಿಲೀಫ್ ಸಿಗುವ ನಿರೀಕ್ಷೆಯಿದೆ.

ಇದರ ಜೊತೆಗೆ ‘ನಂದಾದೇವಿ’ ಮತ್ತು ‘ಜಗ್ ಲಾಡ್ಕಿ’ ಎಂಬ ಮತ್ತೆರಡು ಹಡಗುಗಳು ಇಂದು ಭಾರತ ತಲುಪುವ ಸಾಧ್ಯತೆ ಇದೆ. ‘ನಂದಾದೇವಿ’ ಹಡಗಿನಲ್ಲಿ ಸುಮಾರು 40 ಸಾವಿರ ಮೆಟ್ರಿಕ್ ಟನ್ ಎಲ್‌ಪಿಜಿ ಇದ್ದು, ‘ಜಗ್ ಲಾಡ್ಕಿ’ ಹಡಗು ಸುಮಾರು 81 ಸಾವಿರ ಟನ್ ಕಚ್ಚಾ ತೈಲವನ್ನು ಹೊತ್ತು ಬರುತ್ತಿದೆ.

ಇದನ್ನೆಲ್ಲ ಮೀರಿ, ಇನ್ನೂ 20ಕ್ಕೂ ಹೆಚ್ಚು ಭಾರತೀಯ ಹಡಗುಗಳು ಹೊರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿವೆ. ಇದೇ ವೇಳೆ ಇರಾನ್‌ನಲ್ಲಿ ಯುದ್ಧದ ಪರಿಣಾಮವಾಗಿ ವೈದ್ಯಕೀಯ ತುರ್ತು ಪರಿಸ್ಥಿತಿ ಉಂಟಾಗಿರುವುದರಿಂದ, ಭಾರತದಿಂದ ಔಷಧಿ ಮತ್ತು ವೈದ್ಯಕೀಯ ನೆರವು ಒದಗಿಸಿದರೆ ಉಳಿದ ಹಡಗುಗಳನ್ನು ಬಿಡುಗಡೆ ಮಾಡುವ ಬಗ್ಗೆ ಇರಾನ್ ಮನವಿ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

Back to top button
error: Content is protected !!