ರಾಜಕೀಯ

ಎಸ್‌ಎಂ ಕೃಷ್ಣ ನಿಧನಕ್ಕೆ ಕರ್ನಾಟಕದಲ್ಲಿ ಬುಧವಾರ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ 

Views: 115

ಕನ್ನಡ ಕರಾವಳಿ ಸುದ್ದಿ: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ನಿಧನಕ್ಕೆ ರಾಜ್ಯಾದ್ಯಂತ 3 ದಿನ ಶೋಕಾಚರಣೆ ಹಾಗೂ ಬುಧವಾರ ಸರ್ಕಾರಿ ರಜೆ ಘೋಷಣೆ ಮಾಡಿ ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.

ಡಿಸೆಂಬರ್‌ 11 ರಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಡಿಕೆ ಶಿವಕುಮಾರ್‌ ಅವರು ಮಾಹಿತಿ ನೀಡಿದ್ದು, ಸರ್ಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜು ರಜೆ ನೀಡಲಾಗಿದೆ. ಜತೆಗೆ ಇತರೆ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳು ಕೂಡ ರಜೆ ಇರಲಿವೆ.

ಈ ಸಂದರ್ಭದಲ್ಲಿ ಸರ್ಕಾರದ ಕಟ್ಟದ ಮೇಲೆ ಅರ್ಧ ಮಟ್ಟದಲ್ಲಿ ರಾಷ್ಟ್ರ ಧ್ವಜ ಹಾರಿಸಲಾಗುತ್ತದೆ. ಜತೆಗೆ ಯಾವುದೇ ಸರ್ಕಾರಿ ಮನೋರಂಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದಿಲ್ಲ.

ಸರ್ಕಾರದ ಉಪ ಕಾರ್ಯದರ್ಶಿ ಎಲಿಷಾ ಅಂಡ್ರೂಸ್‌ ಆದೇಶ ಹೊಡಿಸಿದ್ದು, ಕರ್ನಾಟಕದ ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರು ಮಂಗಳವಾರ ಮಧ್ಯರಾತ್ರಿ 2.30 ಕ್ಕೆ ನಿಧನರಾಗಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಡಿಸೆಂಬರ್‌ 11 ರಂದು ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಡಿಸೆಂಬರ್‌ 10, 11 ಹಾಗೂ 12 ರಂದು ಮೂರು ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

 

Related Articles

Back to top button
error: Content is protected !!