ಶಿಕ್ಷಣ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ 

Views: 30

ಬೆಂಗಳೂರು, ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಮಾಡಿಕೊಟ್ಟಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ದಿನಾಂಕವನ್ನು ಪ್ರಕಟಿಸಲಾಗಿದ್ದು, ಜೂನ್‌ 7ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆಗಳು ನಡೆಯಲಿವೆ. ಪ್ರತಿ ವಿಷಯದ ಪ್ರಶ್ನೆ ಪತ್ರಿಕೆ ಓದಲು 15 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ ಎಂದು ತಿಳಿಸಿದೆ.

ಜೂನ್‌ 7-2024: ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಇಂಗ್ಲೀಷ್‌ (ಎಸ್‌ಸಿಇಆರ್‌ಟಿ), ಸಂಸ್ಕೃತ

ಜೂನ್‌ 8, 2024: ತೃತೀಯ ಭಾಷೆ-ಹಿಂದಿ ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಉರ್ದು, ತೆಲುಗು, ಪರ್ಷಿಯನ್‌, ಸಂಸ್ಕೃತ, ಕೊಂಕಣಿ, ತುಳು, ಎನ್‌ಎಸ್‌ಕ್ಯೂಎಫ್‌

ಜೂನ್‌ 10, 2024: ಗಣಿತ, ಸಮಾಜ ಶಾಸ್ತ್ರ

ಜೂನ್‌ 11, 2024: ಅರ್ಥ ಶಾಸ್ತ್ರ, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರಿಂಗ್‌

ಜೂನ್‌-12, 2024- ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ

ಜೂನ್‌ 13, 2024-ದ್ವಿತೀಯ ಭಾಷೆ (ಇಂಗ್ಲೀಷ್‌ ಹಾಗೂ ಕನ್ನಡ)

ಜೂನ್‌ 14, 2024-ಸಮಾಜ ವಿಜ್ಞಾನ

Related Articles

Back to top button