ಶಿಕ್ಷಣ

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ  ಕೆ.ಎಸ್.ಆರ್.ಟಿ.ಸಿ ಗುಡ್ ನ್ಯೂಸ್! 

Views: 18

ಕನ್ನಡ ಕರಾವಳಿ ಸುದ್ದಿ: 2025-26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಇದೇ ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ನಡೆಯಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ ಗುಡ್ ನ್ಯೂಸ್ ನೀಡಿದೆ.

ವಿದ್ಯಾರ್ಥಿಗಳ ಪರೀಕ್ಷಾ ಪ್ರಯಾಣವನ್ನು ಸುಗಮಗೊಳಿಸಲು ಕೆ.ಎಸ್.ಆರ್.ಟಿ.ಸಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣ ಘೋಷಿಸಿದೆ.

ಪರೀಕ್ಷಾ ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ, ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಬಸ್ ಕಂಡಕ್ಟರ್ ಗೆ ಹಾಲ್ ಟಿಕೆಟ್ ತೋರಿಸಿದರೆ ಉಚಿತವಾಗಿ ಪ್ರಯಾಣಿಸುವ ಅವಕಾಶ ಸಿಗಲಿದೆ.

Related Articles

Back to top button
error: Content is protected !!