ಏಕರೂಪ ನಾಗರಿಕ ಸಂಹಿತೆಗೆ ನಮ್ಮ ಸರಕಾರ ವಿರೋಧ : ಮುಖ್ಯಮಂತ್ರಿ ಸಿದ್ದರಾಮಯ್ಯ

Views: 1
ಕೇಂದ್ರ ಸರ್ಕಾರ ತರಲು ಹೊರಟಿರುವ ಏಕರೂಪ ನಾಗರಿಕ ಸಹಿತೆಗೆ ನಮ್ಮ ಸರಕಾರದ ವಿರೋಧ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ಹೊರಗಿಟ್ಟು ಚುನಾವಣಾ ಆಯುಕ್ತರನ್ನು ನೇವಿಸಿಕೊಳ್ಳಲು ಹೊರಟಿದ್ದಾರೆ.
ಐಪಿಸಿ ಸೇರಿದಂತೆ ವಿವಿಧ ಕಾನೂನುಗಳಿಗೆ ಹೊಸ ರೂಪ ನೀಡಲು ಮುಂದಾಗಿದ್ದಾರೆ. ಐಪಿಸಿ 1861 ರಲ್ಲಿ ರಚನೆಯಾಗಿದ್ದು, ಏನೇನು ತೀರ್ಮಾನ ಮಾಡುತ್ತಾರೋ ನೋಡೋಣ. ಈ ದೇಶಕ್ಕೆ ಅನ್ವಯವಾಗುವಂತಹ ಕಾನೂನುಗಳನ್ನು ಮಾಡಬೇಕು ಎಂದರು.
ನಿಗಮ ಮಂಡಳಿ ಅಧ್ಯಕ್ಷರ ಬಗ್ಗೆ ಕೇಳಿದ ಪ್ರಶ್ನೆಗೆ ಅದರ ಬಗ್ಗೆ ಸಮಿತಿ ರಚಿಸಿದ್ದೇವೆ. ಶಾಸಕರಿಗೂ ಸ್ಥಾನಮಾನ ಕೊಡಬೇಕಾಗಿದೆ. ಯಾವ ಅನುಪಾತದಲ್ಲಿ ಹಂಚಿಕೆ ಮಾಡಬೇಕು ಎಂಬುದನ್ನು ಸಮಿತಿ ತೀರ್ಮಾನಿಸುತ್ತದೆ ನಿಗಮದಲ್ಲಿ ಕಾರ್ಯಕರ್ತರಿಗೂ ಕೊಡಲಾಗುವುದು.
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ನಾವು ಸಿದ್ಧರಿದ್ದೇವೆ.
ಬಿಜೆಪಿ ಅವರು 40 ಪರ್ಸೆಂಟ್ ಕಮಿಷನ್ ಪಡೆದು ಈಗ ನಮ್ಮ ಮೇಲೆ ಆರೋಪ ಮಾಡುವ ಯಾವ ನೈತಿಕತೆಯು ಅವರಿಗಿಲ್ಲ ತನಿಖೆ ನಂತರ ಎಲ್ಲಾ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದರು.






