ಇತರೆ

ಐಟಿ ದಾಳಿಗೆ ಬೆದರಿ ಅಧಿಕಾರಿಗಳ ಎದುರಲ್ಲೇ ಉದ್ಯಮಿ  ಪಿಸ್ತೂಲ್‌ನಿಂದ ತಲೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆ

Views: 111

ಕನ್ನಡ ಕರಾವಳಿ ಸುದ್ದಿ : ರಾಜ್ಯ ರಾಜಧಾನಿಯಲ್ಲಿ ಸಂಚಲನ ಮೂಡಿಸುವ ಘಟನೆಯೊಂದು ನಡೆದಿದೆ. ಖ್ಯಾತ ರಿಯಲ್ ಎಸ್ಟೇಟ್ ಸಂಸ್ಥೆ ‘ಕಾನ್ಫಿಡೆಂಟ್ ಗ್ರೂಪ್ಸ್’ ಚೇರ್ಮನ್ ಸಿ.ಜೆ. ರಾಯ್ ಅವರು ಇಂದು ಸಂಜೆ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ನಡೆಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಬೆಂಗಳೂರಿನ ಆನೇಪಾಳ್ಯದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಕಾನ್ಫಿಡೆಂಟ್ ಗ್ರೂಪ್ಸ್ ಕಚೇರಿಯಲ್ಲಿ ಸಿ.ಜೆ. ರಾಯ್ ಅವರು ತಮ್ಮ ಪಿಸ್ತೂಲ್‌ನಿಂದ ತಲೆಗೆ ಶೂಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಘಟನೆಯ ಸಮಯದಲ್ಲಿ ಐಟಿ ಅಧಿಕಾರಿಗಳು ಕಚೇರಿಯಲ್ಲೇ ಇದ್ದು, ವಿಚಾರಣೆ ನಡೆಸುತ್ತಿದ್ದರು ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಕಾನ್ಫಿಡೆಂಟ್ ಗ್ರೂಪ್ಸ್ ಮೇಲೆ ಐಟಿ ಅಧಿಕಾರಿಗಳು ಸತತ ನಿಗಾ ಇಟ್ಟಿದ್ದರು. ಇಂದು ಸಹ ಅಧಿಕಾರಿಗಳು ಕಚೇರಿಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದರು. ಈ ವೇಳೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾದ ರಾಯ್ ಅವರು, ಅಧಿಕಾರಿಗಳ ಎದುರೇ ಅಥವಾ ಪಕ್ಕದ ಕೊಠಡಿಗೆ ತೆರಳಿ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆ ನಡೆದ ತಕ್ಷಣ ಅಶೋಕನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸುವ ಪ್ರಕ್ರಿಯೆ ನಡೆಯುತ್ತಿದೆ. ಉದ್ಯಮ ರಂಗದಲ್ಲಿ ದೈತ್ಯ ಹೆಸರು ಮಾಡಿದ್ದ ಸಿ.ಜೆ. ರಾಯ್ ಅವರ ಈ ಹಠಾತ್ ನಿರ್ಧಾರ ರಿಯಲ್ ಎಸ್ಟೇಟ್ ವಲಯದಲ್ಲಿ ಭಾರೀ ಆಘಾತ ಮೂಡಿಸಿದೆ.

ರಿಯಲ್ ಎಸ್ಟೇಟ್ ಉದ್ಯಮಿ, 11 ಸಿನಿಮಾಗಳ ನಿರ್ಮಾಪಕ

ಡಾ.ಸಿ.ಜೆ.ರಾಯ್ ಅವರು ಪ್ರತಿಷ್ಠಿತ ಕಾನ್ಸಿಡೆಂಟ್ ಗ್ರೂಪ್ ನ ಸಂಸ್ಥಾಪಕ ಮತ್ತು ಅಧ್ಯಕ್ಷರಾಗಿದ್ದಾರೆ. ಕೇರಳ ಮತ್ತು ಬೆಂಗಳೂರು ಮೂಲದ ಈ ರಿಯಲ್ ಎಸ್ಟೇಟ್ ಸಂಸ್ಥೆಯು 159ಕ್ಕೂ ಹೆಚ್ಚು ಯೋಜನೆಗಳನ್ನು ನಿರ್ಮಿಸಿದೆ. ಮರ್ಚೆಂಟ್‌ ನೇವಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಿದ ಇವರು, ಬಳಿಕ ನಿರ್ಮಾಣ ಕ್ಷೇತ್ರದಲ್ಲಿ ಛಾಪು ಮೂಡಿಸಿ, ಶಿಕ್ಷಣ, ಆತಿಥ್ಯ ಮತ್ತು ಚಾರಿಟಿಯಲ್ಲಿ ತೊಡಗಿಸಿಕೊಂಡಿದ್ದರು. ಸಿಜೆ ರಾಯ್ ಸ್ವಿಜರ್ಲೆಂಡ್‌ನ ಎಸ್‌ಬಿಎಸ್‌ ಬಿಸಿನೆಸ್ ಸ್ಕೂಲ್‌ನಿಂದ ಬಿಸಿನೆಸ್ ಅಡ್ಡಿ ನಿಶ್ಲೇಷನ್‌ನಲ್ಲಿ ಡಾಕ್ಟರೇಟ್ ಪಡೆದಿದ್ದರು. ಕಾನ್ಸಿಡೆಂಟ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿ, ಕೇರಳ ಮತ್ತು ಬೆಂಗಳೂರಿನಲ್ಲಿ ಪ್ರಮುಖ ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ದುಬೈ ಮಾರುಕಟ್ಟೆಗೂ ವಿಸ್ತರಿಸಿದ್ದಾರೆ. ಕನ್ನಡ, ಮಲಯಾಳಂ ಸೇರಿ 11 ಸಿನಿಮಾಗಳನ್ನು ನಿರ್ಮಿಸಿ ದ್ದಾರೆ.

Related Articles

Back to top button
error: Content is protected !!