ಜನಮನ
ಐವರು ನುಸುಳುಕೋರರನ್ನು ಕೊಂದು, ಬಳಿಕ ಪ್ರಾಣ ತ್ಯಾಗ ಮಾಡಿದ ಯೋಧ

Views: 118
ಕನ್ನಡ ಕರಾವಳಿ ಸುದ್ದಿ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಆಂಧ್ರಪ್ರದೇಶ ಮೂಲದ ಶ್ರೀ ಸತ್ಯಸಾಯಿ ಜಿಲ್ಲೆಯ ಗೋರಂಟ್ಲ ಮಂಡಲದ ಕಲ್ಲಿತಾಂಡದ ಅಗ್ನಿವೀರ್ ಜವಾನ್ ಮುರಳಿ ನಾಯಕ್ (24) ಮೃತರು.
ಮುರಳಿ ನಾಯಕ್, 2022 ಅಕ್ಟೋಬರ್‌ನಲ್ಲಿ ಅಗ್ನಿವೀರ್‌ಗೆ ಆಯ್ಕೆಯಾಗಿದ್ದರು. ಅವರನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗುರುವಾರ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಕರ್ತವ್ಯದಲ್ಲಿದ್ದಾಗ ಮುರಳಿ ನಾಯಕ್, ಗುಂಡಿನ ಚಕಮಕಿಯಲ್ಲಿ ಐದು ನುಸುಳುಕೋರರನ್ನು ಕೊಂದು, ಬಳಿಕ ಪ್ರಾಣ ತ್ಯಾಗ ಮಾಡಿದ್ದಾರೆ.