ಇತರೆ

ಒಂಟಿ ಮಹಿಳೆ ಭೀಕರ ಹತ್ಯೆ

Views: 107

ಕನ್ನಡ ಕರಾವಳಿ ಸುದ್ದಿ:  ಪತಿಯಿಂದ ದೂರವಾಗಿ ಒಂಟಿಯಾಗಿದ್ದ ಮಹಿಳೆಯನ್ನು ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಕೊಲೆಮಾಡಿರುವ ದುರ್ಘಟನೆ ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ನಡೆದಿದೆ.

ಹೊಂಗಸಂದ್ರದ ಮುನಿಸುಬ್ಬ ರೆಡ್ಡಿ ಲೇಔಟ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಪ್ರಮೋದಾ (35)ಕೊಲೆಯಾದವರು, ಅನೈತಿಕ ಸಂಬಂಧವೇ ಈ ಭೀಕರ ಹತ್ಯೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಪ್ರಮೋದಾ, ಗಾರ್ಮೆಂಟ್ಸ್‌ನಲ್ಲಿ ಉದ್ಯೋಗಿಯಾಗಿದ್ದರು,ಸ್ವಂತ ಸಹೋದರಿಯ ಪತಿ ಸುರೇಶನನ್ನೇ ಮದುವೆಯಾಗಿದ್ದ ಪ್ರಮೋದಾಗೆ ಇಬ್ಬರು( 16) ವರ್ಷದ ಮಗಳು ಸೇರಿ ಇಬ್ಬರು ಮಕ್ಕಳಿದ್ದಾರೆ.

ಕಳೆದ ಕೆಲವು ಸಮಯದಿಂದ ಪತಿಯಿಂದ ದೂರಾಗಿ ಪ್ರತ್ಯೇಕವಾಗಿ ವಾಸವಿದ್ದರು. ಕಳೆದ ಮೂರು ತಿಂಗಳಿನಿಂದ ಹೊಂಗಸಂದ್ರದ ಮುನಿಸುಬ್ಬ ರೆಡ್ಡಿ ಲೇಔಟ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದರು. ಆಕೆಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಬೊಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಿ ಪ್ರಕರಣವನ್ನು ದಾಖಲಿಸಿ ಹಂತಕನ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!