ಇತರೆ

ಒಬ್ಬಂಟಿಯಾಗಿದ್ದ ಮಹಿಳೆ ಹತ್ಯೆ: 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

Views: 65

ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬೆಂಗಳೂರಿನ ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿನ ಮನೆಯೊಂದರಲ್ಲಿ ಈ ಒಂದು ಭೀಕರ ಹತ್ಯೆ ನಡೆದಿದೆ. ಮನೆಯಲ್ಲಿ ಇದ್ದ ಮಹಿಳೆ ಲತಾ ಎನ್ನುವವರನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದ್ದು, ಅಂದಾಜು ಒಂದು ಕೋಟಿ ಮೌಲ್ಯದ ಚಿನ್ನಾಭರಣ ಕದ್ದು ದುಷ್ಕರ್ಮಿಗಳು, ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Back to top button