ಒಮನ್‌ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರಿನ ಯುವಕ ಆತ್ಮಹತ್ಯೆ: ಕೃತ್ಯಕ್ಕೆ ಪ್ರೇಮ ವೈಫಲ್ಯ ಕಾರಣ!
Views: 40
ಕನ್ನಡ ಕರಾವಳಿ ಸುದ್ದಿ: ಒಮನ್‌ನಲ್ಲಿ ಉದ್ಯೋಗದಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೋಮೇಶ್ವರ ನಿವಾಸಿ ಯುವಕ ಪುನೀತ್ ಪೂಜಾರಿ (32)ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಕೃತ್ಯಕ್ಕೆ ಪ್ರೇಮ ವೈಫಲ್ಯ ಕಾರಣ ಎಂದು ಶಂಕಿಸಲಾಗಿದೆ.
ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ, ಕಳೆದ ಒಂದೂವರೆ ವರ್ಷಗಳಿಂದ ಒಮನ್ ದೇಶದಲ್ಲಿ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಊರಿಗೆ ಕೂಡಾ ಬಂದು ಹೋಗಿದ್ದರು.
ಪುನೀತ್ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರು ನಗರದ ಉರ್ವಾ ನಿವಾಸಿ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದರು. ಬಹಳ ಅನ್ನೋನ್ಯವಾಗಿದ್ದ ಜೋಡಿಯು ಹಲವೆಡೆ ಸುತ್ತಾಡಿರುವ ಫೋಟೊಗಳನ್ನ ಜಾಲತಾಣಗಳಲ್ಲಿ ಹಾಕಿದ್ದರು. ಇತ್ತೀಚಿನ ದಿನಗಳಲ್ಲಿ ಯುವತಿಯು ಪುನೀತ್ ನ ಫೋನ್ ಕರೆಗಳನ್ನು ಸ್ವೀಕರಿಸದೇ, ಸಂದೇಶಗಳಿಗೂ ಪ್ರತಿಕ್ರಿಯೆ ನೀಡದೇ ಪ್ರೀತಿಯನ್ನು ನಿರಾಕರಿಸಿದ್ದರು. ಅವಳು ನನ್ನ ಫೋನ್ ತೆಗೆಯುತ್ತಿಲ್ಲ ಎಂದು ಪುನೀತ್ ತನ್ನ ಸ್ನೇಹಿತರಿಗೂ ಹಲವು ಬಾರಿ ಹೇಳಿದ್ದರು ಎನ್ನಲಾಗಿದೆ.
ಪುನೀತ್ ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ನಡೆಸಿದ್ದು, ರಿಜೆಕ್ಷನ್‌ನಿಂದ ಮನನೊಂದ ಪುನೀತ್ ಈ ದಾರಿ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಅಶಾಂತಿಯ ಪರಿಸ್ಥಿತಿಯ ಹಿನ್ನೆಲೆ ಒಮನ್ ದೇಶದ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳಲು ಸಮಯ ಬೇಕಾಗುವ ಸಾಧ್ಯತೆ ಇದೆ., ಮೃತ ದೇಹವನ್ನ ಭಾರತಕ್ಕೆ ತರಳು ವಿಳಂಬವಾಗಬಹುದೆಂದು ಕುಟುಂಬದ ಆಪ್ತರು ಆತಂಕ ವ್ಯಕ್ತಪಡಿಸಿದ್ದಾರೆ.
ಮೃತ ಪುನೀತ್ ತಂದೆ-ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.






