ಇತರೆ

ಓವರ್ ಟೇಕ್ ಮಾಡಲು ಹೋಗಿ ಮರಕ್ಕೆ ಗುದ್ದಿದ ಕಾರು ಸ್ಥಳದಲ್ಲೇ ಇಬ್ಬರು ಯುವಕರ ಸಾವು 

Views: 151

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಸ್ವಿಪ್ಟ್ ಕಾರೊಂದು ಮರಕ್ಕೆ ಗುದ್ದಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಶಿಗ್ಗಾವಿ ಪಟ್ಟಣದ ಬಳಿ ಈ ಅಪಘಾತ ನಡೆದಿದೆ.

ಸವಣೂರು ತಾಲೂಕು ಬೇವಿನಹಳ್ಳಿ ಗ್ರಾಮದ ನಿವಾಸಿಗಳಾದ ನೀಲಪ್ಪ ಮೂಲಿಮನಿ (23), ಸುದೀಪ್ ಕೋಟಿ (18) ಮೃತಪಟ್ಟವರು. ಒಟ್ಟು 7 ಜನ ಯುವಕರ ತಂಡ ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಡಕ್ಕೆ ಕಾರಿನಲ್ಲಿ ಬೆಳಿಗ್ಗೆ ಹೋಗುತ್ತಿದ್ದರು. ಈ ವೇಳೆ ಶಿಗ್ಗಾವಿ ಪಟ್ಟಣದ ಬಳಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು  ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

Back to top button
error: Content is protected !!