ಇತರೆ

ಔತಣಕೂಟ ಮುಗಿಸಿ,ಬಳಿಕ ತಮಾಷೆಗೆಂದು ಹಳಿಯ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವು! 

Views: 384

ಗಂಗಾವತಿ: ಔತಣಕೂಟದ ಬಳಿಕ ತಮಾಷೆಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಇಲ್ಲಿನ ರೈಲ್ವೆ ಸ್ಟೇಷನ್ ಸಮೀಪ ಗುರುವಾರ ತಡರಾತ್ರಿ ನಡೆದಿದೆ.

ನಗರದ ಕಿಲ್ಲಾ ಏರಿಯಾದ ಮೌನೇಶ ಶ್ರೀನಿವಾಸ ಬೈಲ್ ಪತ್ತಾರ (23), ಅಣ್ಣೂರು ಗೌರಮ್ಮ ಕ್ಯಾಂಪಿನ ಸುನಿಲ್ ತಿಮ್ಮಣ್ಣ (23) ಹಾಗೂ ಹಿರೇಜಂತಕಲ್ನ ವೆಂಕಟ ಭೀಮರಾಯ (20) ಮೃತಪಟ್ಟಿದ್ದಾರೆ.

ರೈಲ್ವೆ ಹಳಿಯ ಪಕ್ಕದಲ್ಲಿ ಯುವಕರು ಔತಣಕೂಟ ಮಾಡಿದ್ದಾರೆ. ಬಳಿಕ ತಮಾಷೆಗೆಂದು ಹಳಿಯ ಮೇಲೆಯೇ ಮಲಗಿದ್ದಾರೆ. ಈ ಸಂದರ್ಭದಲ್ಲಿ ಗಂಗಾವತಿ ಮಾರ್ಗವಾಗಿ ಹೊರಟಿದ್ದ ಹುಬ್ಬಳ್ಳಿ-ಸಿಂಧನೂರು ಪ್ಯಾಸೆಂಜರ್ ರೈಲು ಬಂದಿದ್ದು, ಯುವಕರು ಭೀಕರವಾಗಿ ಸಾವನ್ನಪ್ಪಿದ್ದಾರೆ.

ಗದಗ ವಿಭಾಗದ ರೈಲ್ವೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

Related Articles

Back to top button
error: Content is protected !!