ಇತರೆ
ಕಟ್ಟಡದ ಕೆಲಸ ಮಾಡುತ್ತಿದ್ದಾಗ ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು
Views: 41
ಕನ್ನಡ ಕರಾವಳಿ ಸುದ್ದಿ: ಕಟ್ಟಡದ ಕೆಲಸ ಮಾಡುತ್ತಿದ್ದ ದಂಪತಿ ಮೇಲೆ ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ದ್ಯಾವಪ್ಪ (45) ಹಾಗೂ ಶಿವಮ್ಮ (35) ಮೃತಪಟ್ಟ ದಂಪತಿಗಳೆಂದು ಗುರುತಿಸಲಾಗಿದೆ.ಪಿಲ್ಲರ್ ಇಲ್ಲದೆ ಅವೈಜ್ಞಾನಿಕವಾಗಿ ನಿರ್ಮಿಸಿದ್ದ ಮೆಟ್ಟಿಲು ಕುಸಿತವಾಗಿದೆ.
ಘಟನೆಯ ವಿಷಯ ತಿಳಿದ ತಕ್ಷಣ ಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲಿಂಗಸುಗೂರು ಆಸ್ಪತ್ರೆಗೆ ರವಾನಿಸಲಾಗಿದೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.






