ಜನಮನ

ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌ಗೆ ಕರೆ

Views: 3

ಉಡುಪಿ: ಪರವಾನಿಗೆ ಸಮಸ್ಯೆ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಜಿಲ್ಲಾ ಕಟ್ಟಡ ಸಾಮಗ್ರಿ ಲಾರಿ ಟೆಂಪೋ ಮಾಲಕರ ಸಂಘಟನೆಗಳ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್‌ ನಡೆಸಲು ನಿರ್ಧರಿಸಿವೆ.

ಉಡುಪಿ ಜಿಲ್ಲೆಯಾದ್ಯಂತ ಬುಧವಾರದಿಂದ ಆರಂಭಗೊಂಡಿರುವ ಲಾರಿ ಚಾಲಕ ಮಾಲಕರ ಮುಷ್ಕರವು ಮೂರನೇ ದಿನಕ್ಕೆ ಕಾಲಿಟ್ಟಿದೆ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಶುಕ್ರವಾರವು ಲಾಲಿ ಚಾಲಕರು ಹಾಗೂ ಮಾಲಕರು ಕಟ್ಟಡ ಸಾಮಗ್ರಿಗಳ ಸಾಗಾಟ ಸ್ಥಗಿತಗೊಳಿಸಿ, ದರಣಿ ಕುಳಿತಿದ್ದಾರೆ.

ಕಟ್ಟಡ ಸಾಮಗ್ರಿಗಳ ಸಾಗತಕ್ಕೆ ಜಿಲ್ಲಾಡಳಿತ ಹೇರಿರುವ ಕಠಿಣ ನಿಯಮಗಳನ್ನು ವಿರೋಧಿಸಿ ಉಡುಪಿ ಜಿಲ್ಲಾ ಲಾರಿ ಮತ್ತು ಟೆಂಪೋ ಮಾಲೀಕರ ಸಂಘದ ವತಿಯಿಂದ ಕಟ್ಟಡ ಸಾಮಗ್ರಿಗಳ ಸಾಗಾಟವನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಯುತ್ತಿದೆ.

ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ, ಜಿಲ್ಲಾ ಎಸ್‌ಪಿ ಡಾ| ಅರುಣ್‌ ಕೆ. ಅವರು ಐವರು ಶಾಸಕರ ಸಮ್ಮುಖದಲ್ಲಿ ಲಾರಿ, ಟೆಂಪೋ ಮಾಲಕರ ಸಭೆ ನಡೆಸಿದ್ದರೂ ಫ‌ಲಪ್ರದವಾಗಿರಲಿಲ್ಲ.

ಹೀಗಾಗಿ ಒಕ್ಕೂ ಟದ 12 ವಲಯದ ಅಧ್ಯಕ್ಷರು ಸೇರಿದಂತೆ ಪ್ರಮುಖರು ಶುಕ್ರವಾರ ಸಭೆ ನಡೆಸಿ, ಅ.3ರಂದು ಬಂದ್‌ಗೆ ಕರೆ ನೀಡಿದ್ದಾರೆ.

ಬಂದ್‌ ಸಂಬಂಧ ಶನಿವಾರ ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ಒಕ್ಕೂಟದ ಪ್ರತಿನಿಧಿ ರಾಘವೇಂದ್ರ ಶೆಟ್ಟಿ ತಿಳಿಸಿದ್ದಾರೆ

Related Articles

Back to top button
error: Content is protected !!