ಜನಮನ
ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರ ಕದ್ದು ಪರಾರಿ

Views: 1
ಅಂಗಡಿಯೊಂದಕ್ಕೆ ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ವ್ಯಾಪಾರಿ ಕಣ್ಣಿಗೆ ಖಾರದಪುಡಿ ಯರಚಿ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಿಕೆರೆ ಪಟ್ಟಣದಲ್ಲಿ ನಡೆದಿದೆ.
ನಗರದ ವದನಂ ಟೆಕ್ಸ್ ಟೈಲ್ಸ್ ಅಂಗಡಿಗೆ ಮೂವರು ಬೈಕ್ ನಲ್ಲಿ ಬಂದವರು ಏಕಾಏಕಿ ಅಂಗಡಿಗೆ ನುಗ್ಗಿ ವ್ಯಾಪಾರಿ ಗೋವಿಂದರಾಜು ಅವರ ಕಣ್ಣಿಗೆ ಖಾರದ ಪುಡಿ ಎರಚಿ ಸುಮಾರು 3 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದಾರೆ.
ಈ ಬಗ್ಗೆ ಚಳ್ಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ






