ರಾಜಕೀಯ
ಕನಾ೯ಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯ ಮಂತ್ರಿಯಾಗಿ ಡಿ. ಕೆ. ಶಿವಕುಮಾರ್

Views: 0
ಕಾಂಗ್ರೆಸ್ ಚುನಾವಣೆಯಲ್ಲಿ ಭಜ೯ರಿ ಬಹುಮತ ಪಡೆದುಕೊಂಡ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಆಯ್ಕೆಗಾಗಿ ನಡೆದ ಪ್ರಹಸನ ಮುಕ್ತಾಯಗೊಂಡಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಹುದ್ದೆಯ ಹಗ್ಗ ಜಗ್ಗಾಟದಲ್ಲಿ ಕೊನೆಗೂ ಸಿದ್ದರಾಮಯ್ಯ ಕೈ ಮೇಲಾಯಿತು. ಇಬ್ಬರೂ ನಾಯಕರು ಎರಡುವರೆ ವಷ೯ಗಳ ಅವಧಿಗೆ ಸಿಎಂ ಹುದ್ದೆ ವಹಿಸಿಕೊಳ್ಳುವಂತೆ ಒಪ್ಪಿದ್ದಾರೆ.
ಸೋನಿಯಾ ಗಾಂಧಿ ಮಧ್ಯಸ್ಥಿಕೆಯಲ್ಲಿ ನಿನ್ನೆ ರಾತ್ರಿ ತಮ್ಮ ನಿವಾಸಕ್ಕೆ ಕರೆದು ಮಾತುಕತೆ ನಡೆಸಿ, ಒಪ್ಪಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶನಿವಾರ ಅಪರಾಹ್ನ 12:30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕರಿಸುವ ಕಾಯ೯ಕ್ರಮದಲ್ಲಿ ದಿಲ್ಲಿಯ ಕಾಂಗ್ರೆಸ್ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.






