ಸಾಂಸ್ಕೃತಿಕ

ಕನ್ನಡದ ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

Views: 0

ಕನ್ನಡದ ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳ ಹಿಂದೆ ಅವರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು ಎಂದು ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೂರು ದಿನಗಳ ಹಿಂದೆಯಷ್ಟೇ ಅವರು ಲೀಲಾವತಿ ಅವರ 11ನೇ ದಿನದ ಕಾರ್ಯದಲ್ಲಿ ಭಾಗಿಯಾಗಿದ್ದರು. ವಿನೋದ್ ರಾಜ್ ಅವರಿಗೆ ಸಾಂತ್ವನ ಕೂಡ ಹೇಳಿದ್ದರು. ಆಸಮಯದಲ್ಲಿ ಆರೋಗ್ಯವಾಗಿದ್ದ ಹೇಮಾ ಅವರು, ಅಲ್ಲಿಂದ ಬಂದ ನಂತರ ಏಕಾಏಕಿ ಮೆದುಳಿನಲ್ಲಿ ರಕ್ತಸ್ರಾವ ಆಗಿದೆ ಎಂದು ಹೇಳಲಾಗುತ್ತಿದೆ.

ಕನ್ನಡ, ಮಲಯಾಳಂ, ತೆಲುಗು, ತಮಿಳು ಹೀಗೆ ನಾನಾ ಭಾಷೆಗಳಲ್ಲಿ ಹೇಮಾ ಚೌಧರಿ ನಟಿಸಿದ್ದಾರೆ. ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.  ಹೇಮಾ ಅವರ ಅನಾರೋಗ್ಯ ಅವರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹೇಮಾ ಅವರ ಪುತ್ರ ಐರ್ಲೆಂಡ್ ನಲ್ಲಿ ಇದ್ದಾರೆ. ಅವರು ಅಲ್ಲಿಂದ ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ.

Related Articles

Back to top button
error: Content is protected !!