ಸಾಂಸ್ಕೃತಿಕ
ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ
Views: 257
ಕನ್ನಡ ಕರಾವಳಿ ಸುದ್ದಿ: ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರ್ನಾಟಕದ ಹಾಸನ ಮೂಲದ ಸಕಲೇಶಪುರದ ನಟಿ ಶೋಭಿತಾ ಗಾಳಿಪಟ, ಮಂಗಳಗೌರಿ, ಕೋಗಿಲೆ, ಬ್ರಹ್ಮಗಂಟು, ಕೃಷ್ಣ ರುಕ್ಮಿಣಿ, ದೀಪವು ನಿನ್ನದೆ ಗಾಳಿಯು ನಿನ್ನದೆ, ಅಮ್ಮಾವ್ರು ಮತ್ತು ಮನೆದೇವರು ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು. ನಿನ್ನಿಂದಲೇ, ಬ್ರಹ್ಮಗಂಟು ಧಾರಾವಾಹಿಗಳು ಅವರಿಗೆ ಬಹಳಷ್ಟು ಹೆಸರು ತಂದು ಕೊಟ್ಟಿತ್ತು.
ಎರಡೊಂದ್ಲಾ ಮೂರು, ಎಟಿಎಮ್ , ಒಂದ್ ಕಥೆ ಹೇಳ್ಲಾ, ಜಾಕ್ ಪಾಟ್, ಅಪಾರ್ಟ್‌ಮಂಟ್ ಟು ಮರ್ಡರ್, ವಂದನಾ ಸಿನಿಮಾದಲ್ಲಿ ನಟಿಸಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ಹೈದರಾಬಾದ್‌ನಲ್ಲಿ ಮದುವೆಯಾಗಿ ಸೆಟಲ್ ಆಗಿದ್ದರು. ಇನ್ನು ಶೋಭಿತಾ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.