ಸಾಂಸ್ಕೃತಿಕ

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಎಂ.ಎಸ್. ಉಮೇಶ್ ನಿಧನ

Views: 86

ಕನ್ನಡ ಕರಾವಳಿ ಸುದ್ದಿ: ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಎಂ.ಎಸ್. ಉಮೇಶ್ ನಿಧನ ಅವರು ಇಂದು (ಭಾನುವಾರ) ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟಿದ್ದಾರೆ.

ಉಮೇಶ್ ಅವರು ಮನೆಯಲ್ಲೇ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೆಚ್ಚಿನ ಪರೀಕ್ಷೆಗಳಿಗೆ ಒಳಪಡಿಸಿದ್ದ ವೈದ್ಯರು ರೋಗವನ್ನು ಖಚಿತಪಡಿಸಿಕೊಂಡು, ಕಿಮೊಥೆರಪಿ ಹಾಗೂ ಇಮ್ಯೂನೋಥೆರಪಿ ನೀಡಲಾಗುತ್ತಿತ್ತು.

1960ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಉಮೇಶ್‌ ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು. ಉಮೇಶ್‌ ಸುಮಾರು 350 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದು, ಡಾ. ರಾಜಕುಮಾರ್‌, ವಿಷ್ಣುವರ್ಧನ್‌ ಸೇರಿದಂತೆ ಹಲವು ಮೇರು ನಟರ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದರು.

1945ರ ಏಪ್ರಿಲ್‌ 24ರಂದು ಮೈಸೂರಿನಲ್ಲಿ ಜನಿಸಿದ ಅವರು 1960ರಲ್ಲಿ ಬಿಆರ್‌ ಪಂಥುಲು ನಿರ್ದೇಶನದ ‘ಮಕ್ಕಳ ರಾಜ್ಯ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. ಬಳಿಕ ಹಲವಾರು ಸಿನಿಮಾಗಳಲ್ಲಿ ನಟಿಸುವ ಅವಕಾಶ ಪಡೆದುಕೊಂಡರು. ಉಮೇಶ್ ಅವರು ಅಭಿನಯಿಸಿದ್ದ ‘ಕಮಲ್ ಶ್ರೀದೇವಿ’, ‘ಐ ಆ್ಯಮ್ ಗಾಡ್’ ಸಿನಿಮಾಗಳು ಇತ್ತೀಚೆಗೆ ಬಿಡುಗಡೆಯಾಗಿತ್ತು.

 

 

 

Related Articles

Back to top button
error: Content is protected !!