ಸಾಂಸ್ಕೃತಿಕ
ಕನ್ನಡ ಭಾಷೆ ಹುಟ್ಟಿದ್ದೇ ತಮಿಳಿನಿಂದ: ನಟ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರಿಂದ ವ್ಯಾಪಕ ಆಕ್ರೋಶ

Views: 20
ಕನ್ನಡ ಕರಾವಳಿ ಸುದ್ದಿ: ಜೂ.5ರಂದು ಬಿಡುಗಡೆಯಾಗುತ್ತಿರುವ ತಮ್ಮ ‘ಥಗ್ ಲೈಫ್’ ಚಿತ್ರದ ಪ್ರಚಾರದ ವೇಳೆ ನಟ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಚೆನ್ನೈನಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಕಮಲ್, ‘ಕನ್ನಡ ಹುಟ್ಟಿರುವುದು ತಮಿಳು ಭಾಷೆಯಿಂದ’ ಎಂದು ಹೇಳಿದ್ದಾರೆ. ನಟನ ಹೇಳಿಕೆಗೆ ತಮಿಳಿಗರಿಂದ ಬೆಂಬಲ ವ್ಯಕ್ತವಾಗುತ್ತಿದೆ. ಆದರೆ ಇದರಿಂದ ಕ್ರೋಧಿತರಾಗಿರುವ ಕನ್ನಡಿಗರು, ‘ಕನ್ನಡಕ್ಕೆ ತಮಿಳು ಮೂಲ ಅಲ್ಲ. ತಮಿಳಿಗಿಂತಲೂ ಕನ್ನಡ ಬಹಳ ಹಳೆಯ ಭಾಷೆ’ ಎಂದು ಕನ್ನಡಿಗರು ಹೇಳಿಕೆ ನೀಡಿದ್ದಾರೆ.