ಇತರೆ

ಕಬ್ಬು ಕಟಾವು ಮಷಿನ್ ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣ ಸಾವು

Views: 86

ಕನ್ನಡ ಕರಾವಳಿ ಸುದ್ದಿ: ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.

ಬೌರವ್ವ ಲಕ್ಷ್ಮಣ್ ಕೋಬಡೆ (58) ಹಾಗೂ ಲಕ್ಷ್ಮಿಬಾಯಿ ಮಲ್ಲಪ್ಪ ರುದ್ರಗೌಡರ (60) ಸ್ಥಳದಲ್ಲೇ ಮೃತಪಟ್ಟವರು.

ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಮಷಿನ್ ಮೈಮೇಲೆ ಹಾಯ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಾಲಕನ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬೆನ್ನಲ್ಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಸಂಬಂಧ ಹತ್ತಿರದ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Related Articles

Back to top button
error: Content is protected !!