ಇತರೆ

ಕಮಲಶಿಲೆಯ ಬರೆಗುಂಡಿ ನಿವಾಸಿ ಚಾತ್ರ ಎಂಟರ್‌ಪೈಸಸ್ ಮಾಲಕ ಉದಯ ಚಾತ್ರ ಆತ್ಮಹತ್ಯೆ 

Views: 358

ಕನ್ನಡ ಕರಾವಳಿ ಸುದ್ದಿ: ಕಮಲಶಿಲೆಯ  ಬರೆಗುಂಡಿ ನಿವಾಸಿ, ಸಿದ್ದಾಪುರ ಚಾತ್ರ ಎಂಟರ್‌ಪೈಸಸ್ ಮಾಲಕ ಉದಯ ಚಾತ್ರ (43) ಅವರು ಸೆ. 17ರಂದು ಮನೆಯಲ್ಲಿ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ತಂದೆ,ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಉದಯ ಚಾತ್ರ ಅವರು ಬುಧವಾರ ಬೆಳಿಗ್ಗೆ  ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಗೆ ತನ್ನ ತಂದೆ, ತಾಯಿ ಹಾಗೂ ಪತ್ನಿಯ ಜತೆಯಲ್ಲಿ ಆಗಮಿಸಿದ್ದರು. ಬಳಿಕ ಅವರನ್ನು ಮಹಾಸಭೆಯಲ್ಲಿ ಬಿಟ್ಟು ಸಿದ್ದಾಪುರದಲ್ಲಿರುವ ಚಾತ್ರ ಎಂಟರ್‌ಪೈಸಸ್‌ಗೆ ಹೋಗುವುದಾಗಿ ಹೇಳಿ ಹೊರಟಿದ್ದರು. ಆದರೆ ಕಮಲಶಿಲೆಯಿಂದ ತನ್ನ ಅಂಗಡಿಗೆ ಹೋಗದೆ ನೇರವಾಗಿ ಮನೆಗೆ ಹೋಗಿ ಮಹಡಿ ಮೇಲಿನ ಕೋಣೆಗೆ ತೆರಳಿ ಫ್ಯಾನಿಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಂದೆ, ತಾಯಿ ಹಾಗೂ ಪತ್ನಿ ಅವರು ಸಹಕಾರಿ ಸಂಘದ ಸಭೆ ಮುಗಿಸಿ ಮನೆಗೆ ಮರಳಿದಾಗ ಅವರ ವಾಹನ ಅಲ್ಲೇ ಇರುವುದರಿಂದ ಮನೆಯ ಸುತ್ತಮುತ್ತ ಹಾಗೂ ಒಳಗೆ ಹುಡುಕಾಟ ನಡೆಸಿ ನಂತರ ಮಹಡಿಯ ಕೋಣೆಗೆ ಹೋಗಿ ನೋಡಿದಾಗ ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ

ವ್ಯವಹಾರ ಉತ್ತಮವಾಗಿ ನಡೆಯುತ್ತಿದೆ. ಉತ್ತಮ ಕೃಷಿಕರು ಹೌದು. ಆರ್ಥಿಕವಾಗಿ ಸಬಲರಾಗಿದ್ದ ಇವರ ಆತ್ಮಹತ್ಯೆಗೆ ಕಾರಣಗಳೇನು? ಎಂಬುವುದು ಆಪ್ತ ವಲಯದಿಂದ ಕೇಳಿಬಂದಿದೆ.

ಪತ್ನಿ ಅಕ್ಷರ ಚಾತ್ರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button