ಇತರೆ
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ನಾಯಕ ಸೀತಾರಾಮ್ ಯೆಚೂರಿ ನಿಧನ

Views: 39
ದೆಹಲಿ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ನಿಧನರಾಗಿದ್ದಾರೆ.
ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ಬಳಲುತ್ತಿದ್ದ CPI(M) ಹಿರಿಯ ನಾಯಕ ಸೀತಾರಾಮ್ ಯೆಚೂರಿ ಅವರನ್ನು ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ಗೆ ದಾಖಲು ಮಾಡಲಾಗಿತ್ತು. ಈಗ ಚಿಕಿತ್ಸೆ ಫಲಿಸದ ಕಾರಣ ಇವರು ನಿಧನರಾದರು.
ಇತ್ತೀಚೆಗೆ 72 ವರ್ಷದ ಸಿಪಿಐಎಂ ಹಿರಿಯ ನೇತಾರ, ಕಾಮ್ರೇಡ್ ಸೀತಾರಾಮ್ ಯೆಚೂರಿ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದರು. ಹಾಗಾಗಿ ಇವರಿಗೆ ಎದೆ ಸೋಂಕು ಕಾಣಿಸಿಕೊಂಡಿತ್ತು. ಆದ್ದರಿಂದ ಚಿಕಿತ್ಸೆಗಾಗಿ ಹಿರಿಯ ನಾಯಕನನ್ನು ಚಿಕಿತ್ಸೆಗಾಗಿ ಏಮ್ಸ್ಗೆ ದಾಖಲಿಸಲಾಗಿತ್ತು. ಇವರು ವೆಂಟಿಲೇಟರ್ನಲ್ಲಿದ್ದರು.
ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್ಯು) ವಿದ್ಯಾರ್ಥಿಯಾಗಿದ್ದಾಗ ಇವರನ್ನು ತುರ್ತು ಪರಿಸ್ಥಿತಿಯ ಸಮಯದಲ್ಲಿ ಬಂಧಿಸಲಾಗಿತ್ತು. 3 ಬಾರಿ ಜೆಎನ್ಯು ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.






