ಶಿಕ್ಷಣ

ಕರಾಟೆಯಲ್ಲಿ 3 ಚಿನ್ನ, 4 ಬೆಳ್ಳಿಯ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 

Views: 44

ಕುಂದಾಪುರ :ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ವಿಭಾಗ )ಹಾಗೂ ಎಸ್. ಎನ್.ವಿ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕ್ರಮವಾಗಿ ಸಾಯಿ ವಿಘ್ನೇಶ್(82+kg) ವಿಭಾಗದಲ್ಲಿ ಪ್ರಥಮ ಸ್ಥಾನ,

ಅಶ್ಮಿತ್ ಸಿ.ಪೂಜಾರಿ(-45kg)ಪ್ರಥಮ ಸ್ಥಾನ, ಅಮಿತ್ (-54kg)ಕುಮಾರ್ ಪ್ರಥಮ ಸ್ಥಾನ.

ಹಾಗೂ ನಾಲ್ವರು ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕಗಳನ್ನು ಪಡೆದಿರುತ್ತಾರೆ. ಕ್ರಮವಾಗಿ, ರನಿತಾ(-36 kg), ರಾಹುಲ್ ಜಿ, (-58kg)ಅರ್ಜುನ್ ಎಸ್ ಶೆಟ್ಟಿ,(-50 kg)ನಿಖಿಲ್ ಕಾಂಚನ್.(72+kg).

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Back to top button