ಶಿಕ್ಷಣ

ಕರಾಟೆ ಚಾಂಪಿಯನ್‌ಶಿಪ್ 2026: ಶ್ರೀ ಶಾರದಾ ಶಾಲೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ

Views: 104

ಕನ್ನಡ ಕರಾವಳಿ ಸುದ್ದಿ:ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ಫೆಬ್ರವರಿ 8 ರಂದು ನಡೆದ ರಾಜ್ಯಮಟ್ಟದ ಇಂಟರ್ ಡೋಜು ಕರಾಟೆ ಚಾಂಪಿಯನ್‌ಶಿಪ್ 2026ರಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆ ಬಸ್ರೂರು ಇಲ್ಲಿನ 38 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದು, ಹಲವು ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಗಳನ್ನು ಗಳಿಸುವ ಮೂಲಕ ಶಾಲೆಯ ಹೆಸರನ್ನು ರಾಜ್ಯಮಟ್ಟದಲ್ಲಿ ಮೆರಗುಗೊಳಿಸಿದ್ದಾರೆ.

ಈ ಮಹತ್ವದ ಸಾಧನೆಗೆ ಶಾಲಾ ಸಂಚಾಲಕರಾದ ಶ್ರೀಯುತ ಸಂತೋಷ್ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಹೃತ್ಪೂರ್ವಕವಾಗಿ ಅಭಿನಂದಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆ ಮಾಡುವಂತೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಶಾಲೆಯ ಆಡಳಿತ ಅಧಿಕಾರಿ, ಮುಖ್ಯೋಪಾಧ್ಯಾಯರು, ಎಲ್ಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯವರು ಕೂಡ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆ ಸಲ್ಲಿಸಿ, ಅವರ ಮುಂದಿನ ಸ್ಪರ್ಧೆಗಳಿಗೆ ಶುಭಾಶಯಗಳನ್ನು ಕೋರಿದರು.

ಈ ಸಾಧನೆಯಿಂದ ಶಾಲೆಯ ಹೆಸರು ರಾಜ್ಯಮಟ್ಟದಲ್ಲಿ ಮತ್ತಷ್ಟು ಮೆರೆದಿದ್ದು, ಶಾಲಾ ವಲಯದಲ್ಲಿ ಅಪಾರ ಸಂತಸ ವ್ಯಕ್ತವಾಗಿದೆ.

Related Articles

Back to top button
error: Content is protected !!