ಕರಾವಳಿ

ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ- “ಆರೆಂಜ್‌ ಅಲರ್ಟ್‌” ಘೋಷಣೆ

Views: 106

ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸು ಪಡೆಯುವ  ನಿರೀಕ್ಷೆಯಿದೆ. ಮುಂದಿನ ಒಂದು ವಾರ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ  ಆರೆಂಜ್ ಅಲರ್ಟ್‌, ಇನ್ನು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್‌ ಘೋಷಣೆ ಮಾಡಿದೆ.

ಇಂದಿನಿಂದ (ಮೇ 20) ಮುಂದಿನ 7 ದಿನಗಳ ಕಾಲ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಭಾರೀ ಮಳೆ ಸುರಿಯುವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದ್ದು, ಹಲವು ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಮೇ 20ರಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಉತ್ತರ ಕನ್ನಡ, ಹಾವೇರಿ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

ಇನ್ನು ಮೇ 21ರಂದು ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಉತ್ತರ ಕನ್ನಡ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮೇ 22ರಂದು ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಿಸಲಾಗಿದ್ದು, ಮತ್ತೊಂದೆಡೆ ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

Related Articles

Back to top button
error: Content is protected !!