ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ?
Views: 58
ಕನ್ನಡ ಕರಾವಳಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ಕೆಲವೆಡೆ ವ್ಯಾಪಕ ಮಳೆ ಆಗಲಿದ್ದು, ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೇ ವೇಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ ನೀಡಲಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎನ್ನಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ವಿವರ ಇಲ್ಲಿದೆ.
ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ ನೀಡಲಾಗಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎನ್ನಲಾಗಿದೆ.
ಕರಾವಳಿಯಲ್ಲಿ ವ್ಯಾಪಕ ಮಳೆ:
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.






