ಕರಾವಳಿ
ಕರಾವಳಿಯಾದ್ಯಂತ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ

Views: 100
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ಜುಲೈ15,16,ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಜುಲೈ 17 ರಿಂದ 19 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು ದಿನವಿಡೀ ಉತ್ತಮ ಮಳೆ ಬಂದಿದೆ. ಮಳೆಯ ಜತೆಗೆ ಬಲವಾದ ಗಾಳಿಯೂ ಬೀಸುತ್ತಿದೆ. ಸಮುದ್ರದಲ್ಲಿ ಅಬ್ಬರದ ಅಲೆಗಳು ಕಂಡು ಬರುತ್ತಿವೆ. ಗಾಳಿಯ ರಭಸಕ್ಕೆ ಅಲ್ಲಲ್ಲಿ ಮರ ಬಿದ್ದು ಸಂಚಾರ ಅಸ್ತವ್ಯಸ್ತ, ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.
ಅರಬ್ಬಿ ಸಮುದ್ರ ಭಾಗದಲ್ಲಿ ಉಂಟಾಗಿರುವ ಹವಾಮಾನ ವೈಪರಿತ್ಯದ ವಿಪರೀತ ಪ್ರಭಾವದಿಂದಾಗಿ ಮುಂಗಾರು ಮಳೆ ಮತ್ತಷ್ಟು ಚುರುಕಾಗಿದೆ. ಹೀಗಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿತ್ಯ 200 ಮಿಲಿ ಮೀಟರ್‌ಗಿಂತಲೂ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ.