ಕರಾವಳಿ

ಕರಾವಳಿಯಾದ್ಯಂತ ಗಾಳಿ ಮಳೆ ಅಬ್ಬರ; ಮುನ್ನೆಚ್ಚರಿಕೆಗೆ ಸೂಚನೆ

Views: 347

ಉಡುಪಿ : ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಗಾಳಿಯ ಅಬ್ಬರ ಜೋರಾಗಿದೆ. ಅದರಲ್ಲೂ ಅಲ್ಲಲ್ಲಿ ಏಕಾಏಕಿ ಸುಂಟರಗಾಳಿ ಬೀಸುತ್ತಿದ್ದು, ಇದರಿಂದ ಭಾರೀ ಹಾನಿ ಸಂಭವಿಸಿದೆ. ಹಲವು ಮರ, ವಿದ್ಯುತ್‌ ಕಂಬಗಳು ಉರುಳಿ ಬಿದ್ದಿವೆ. ಇನ್ನೂ ಕೆಲವು ದಿನಗಳ ಕಾಲ ಮಳೆಯೊಂದಿಗೆ ರಭಸವಾಗಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ತಿಳಿಸಿದೆ.

ಉಡುಪಿ ಜಿಲ್ಲೆಯಲ್ಲಿ ಇನ್ನಷ್ಟು ದಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಜೀವ ಹಾನಿ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿ ಉಂಟಾಗದಂತೆ ನೋಡಿ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರಗಿದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಗಾರು ಮಳೆ ಆಗಸ್ಟ್‌ ಕೊನೆಯವರೆಗೂ ಇರಲಿದೆ. ನೆರೆ, ಪ್ರವಾಹ ಯಾವಾಗ ಬೇಕಾದರೂ ಉಂಟಾಗುವ ಸಾಧ್ಯತೆಯಿದೆ. ಇವುಗಳ ನಿರ್ವ ಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು. ನೆರೆ ಸೃಷ್ಟಿಯಾಗುವ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಿಸುವುದು ಸಹಿತ ಅವರಿಗೆ ಅಗತ್ಯ ಸಹಾಯ ನೀಡಬೇಕು ಎಂದರು.

 

Related Articles

Back to top button