ಕರಾವಳಿ

ಕರಾವಳಿಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆ ನಿರೀಕ್ಷೆ 

Views: 31

ಕನ್ನಡ ಕರಾವಳಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೆರೆರಾಜ್ಯಗಳಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ, ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಕರಾವಳಿ ಪ್ರದೇಶದಲ್ಲಿ ಮಂಗಳವಾರದಿಂದ ವರುಣನ ಅಬ್ಬರಿಸಿದ್ದಾನೆ. ಬಿಸಿಲ ಕಾವಿನಲ್ಲಿ ಬೆಂದಿದ್ದ ಜನರು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ

ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ, ಮಲೆನಾಡು ಪ್ರದೇಶದಲ್ಲಿ ವರುಣ ಅಬ್ಬರಿಸಲಿದ್ದು, ಎಲ್ಲೋ ಅಲರ್ಟ್ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಮುಂದಿನ ಮೂರು ದಿನಗಳ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

 

Related Articles

Back to top button
error: Content is protected !!