ಕರಾವಳಿಯ ಈ ಜಿಲ್ಲೆಗಳಿಗೆ ಭಾರೀ ಗಾಳಿ ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Views: 21
ಕನ್ನಡ ಕರಾವಳಿ ಸುದ್ದಿ: ರಾಜ್ಯಾದ್ಯಂತ ಮಳೆ ಮತ್ತೆ ಬೀಳಲಿದೆ. ಕರಾವಳಿ ಮತ್ತು ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಜುಲೈ 30 ಮತ್ತು 31 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಗಾಳಿ ಸಹಿತ ಪ್ರಚಂಡ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.
ಜುಲೈ 31ರವರೆಗೆ ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿಯಲಿದ್ದು, ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಮಳೆರಾಯನ ಆರ್ಭಟ ಮುಂದುವರಿಯಲಿದೆ. ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಹಾಗೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಮೈಸೂರು, ಮಂಡ್ಯ ಬಳ್ಳಾರಿ ಹಾಗೂ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಈ ಕಾರಣದಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.






