ಜನಮನ
ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ ಜಯರಾಮ್ ಭಟ್ ಹೃದಯಘಾತದಿಂದ ನಿಧನ

Views: 0
ಕರ್ಣಾಟಕ ಬ್ಯಾಂಕ್ ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿದ್ದ ಪಿ.ಜಯರಾಮ್ ಭಟ್ ಇಂದು ಅಪರಾಹ್ನ ಹೃದಯಘಾತದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.
ಇಂದು ಅಪರಾಹ್ನ ಮುಂಬೈಯಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದ ಸಂದರ್ಭದಲ್ಲಿ ಅವರು ಹಠಾತ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
2009ರಲ್ಲಿ ಕರ್ಣಾಟಕ ಬ್ಯಾಂಕ್ ನಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಮೂರು ಅವಧಿಗೆ ಬ್ಯಾಂಕ್ ನಾಯಕತ್ವ ವಹಿಸಿದ್ದರು. ಅವರ ಅವಧಿಯಲ್ಲಿ ಇ-ಲಾಬಿ, ಮೊಬೈಲ್ ಬ್ಯಾಂಕಿಂಗ್, ಪಿಎಎಸ್, ಆನ್ಲೈನ್ ಟ್ರೇಡಿಂಗ್ ಅಕೌಂಟ್, ಟ್ರಾವೆಲ್ ಕಾರ್ಡ್ ಗಿಫ್ಟ್ ಕಾರ್ಡ್ ಮುಂತಾದ ಯಶಸ್ವಿ ಯೋಜನೆಗಳನ್ನು ಪರಿಚಯಿಸಿ ಗ್ರಾಹಕರಿಂದ ಭಾರೀ ಮೆಚ್ಚುಗೆ ಗಳಿಸಿದ್ದಾರೆ. ಅವರ ಆಡಳಿತದ ಅವಧಿಯಲ್ಲಿ ಕರ್ಣಾಟಕ ಬ್ಯಾಂಕ್ ಸರ್ವಾಂಗೀಣ ಪ್ರಗತಿ ಕಂಡಿದೆ.ಇವರ ಸಾಧನೆಗೆ ಹಲವಾರು ಪ್ರಶಸ್ತಿ ಬಂದಿದೆ.






