ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ಎಲ್ಲಿ ಯಾವಾಗ ಎಲೆಕ್ಷನ್…ಇಲ್ಲಿದೆ ಮಾಹಿತಿ

Views: 45
ಬೆಂಗಳೂರು : ಲೋಕಸಭಾ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ದೇಶಾದ್ಯಂತ 7 ಹಂತಗಳಲ್ಲಿ ಸಂಸತ್‌ನ ಕೆಳಮನೆಯಾದ ಲೋಕಸಭಾ ಚುನಾವಣೆ ನಡೆಯಲಿದೆ. ಅದರಂತೆ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 26 ರಂದು 14 ಕ್ಷೇತ್ರಗಳಿಗೆ, ಎರಡನೇ ಹಂತದಲ್ಲಿ ಮೇ 07 ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಜೂನ್ 04ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದೆ
ಉಡುಪಿ – ಚಿಕ್ಕಮಗಳೂರು,
ಹಾಸನ
ದಕ್ಷಿಣ ಕನ್ನಡ
ಚಿತ್ರದುರ್ಗ
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಉತ್ತರ
ಬೆಂಗಳೂರು ಕೇಂದ್ರ
ಬೆಂಗಳೂರು ದಕ್ಷಿಣ
ಚಿಕ್ಕಬಳ್ಳಾಪುರ
ಕೋಲಾರ
ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದ ಮತದಾನ ಮೇ 07 ರಂದು ನಡೆಯಲಿದ್ದು,
ಚಿಕ್ಕೋಡಿ
ಬೆಳಗಾವಿ
ಬಾಗಲಕೋಟೆ
ಬಿಜಾಪುರ
ಗುಲ್ಬರ್ಗಾ
ರಾಯಚೂರು
ಬೀದರ್
ಕೊಪ್ಪಳ
ಬಳ್ಳಾರಿ
ಹಾವೇರಿ
ಧಾರವಾಡ
ಉತ್ತರ ಕನ್ನಡ
ದಾವಣಗೆರೆ
ಶಿವಮೊಗ್ಗ
ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.






