ಕೃಷಿ

ಕರ್ನಾಟಕದ ಬರ ಪರಿಹಾರಕ್ಕೆ ಸುಪ್ರಿಂಕೋರ್ಟ್ ನಿಂದ 7 ದಿನ ಗಡುವು ಪಡೆದ ಕೇಂದ್ರ ಸರ್ಕಾರ 

Views: 47

ನವದೆಹಲಿ, ಕೇಂದ್ರ ಚುನಾವಣಾ ಆಯೋಗ ದಿಂದ ಅನುಮತಿ ಪಡೆದು ಕರ್ನಾಟಕದಲ್ಲಿ ಬರ ಪರಿಹಾರ ಕಾಮಗಾರಿಗಳಿಗಾಗಿ ಏ.29ರೊಳಗೆ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಇಂದು ಮಾಹಿತಿ ನೀಡಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧದ ಕಾನೂನು ಸಮರದಲ್ಲಿ ರಾಜ್ಯ ಸರ್ಕಾರಕ್ಕೆ ಜಯ ಸಿಕ್ಕಂತಾಗಿದೆ. ಮುಂದಿನ ವಿಚಾರಣೆಯನ್ನು ಏ.29ಕ್ಕೆ ಮುಂದೂಡಿದೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದರೂ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಬಂದಿಲ್ಲ. ಈ ಕುರಿತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಯ ವಿಚಾರಣೆ ಇಂದು ಮುಂದುವರಿಸಿದ ನ್ಯಾ.ಮೂರ್ತಿ ಬಿ.ಆರ್. ಗವಾಯಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠದಲ್ಲಿ ನಡೆದ ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ವಾದ ಮಂಡಿಸಿದರು.

ಬರ ಪರಿಹಾರ ಅನುದಾನ ಬಿಡುಗಡೆ ಮಾಡುವ ಸಂಬಂಧ ಚುನಾವಣೆ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ. ಸೋಮವಾರದೊಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಅಟಾರ್ನಿ ಜನರಲ್ ನ್ಯಾಯಪೀಠಕ್ಕೆ ವಿವರಿಸಿದರು.

ವಿಚಾರಣೆ ಸಂದರ್ಭದಲ್ಲಿ ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏ.29ಕ್ಕೆ ಮೂಂದೂಡಿತು.

ರಾಜ್ಯದ ಬಹುತೇಕ ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ತಲೆದೋರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣ ಭೈರೇಗೌಡ 2024 ಡಿಸೆಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.

ರಾಜ್ಯದ 226 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದೆ. ಅದರಲ್ಲೂ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಬಿಗಾಡಯಿಸಿದೆ. ಈ ಹಿನ್ನೆಲೆಯಲ್ಲಿ 48.19ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಾಶವಾಗಿವೆ. ಇದರಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವರಿಕೆ ಮಾಡಿಕೊಟ್ಟಿತ್ತು.

ಬರ ಪರಿಹಾರ ಕಾಮಗಾರಿ ಕೈಗೊಳ್ಳಲು 18,127.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಅನುದಾನದಲ್ಲಿ 4,663 ಕೋಟಿ ರೂ. ಇನ್ ಫುಟ್ ಸಬ್ಸಿಡಿ 12,577 ಕೋಟಿ ರೂ. ತುರ್ತು ಪರಿಹಾರ ನೀಡಬೇಕು. ಕುಡಿಯುವ ನೀರಿಗಾಗಿ 566 ಕೋಟಿ ರೂ. ಹಾಗೂ ಜಾನುವಾರುಗಳ ಸಂರಕ್ಷಣೆಗಾಗಿ 363 ಕೋಟಿ ರೂ.ಒದಗಿಸಬೇಕೆಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿತ್ತು.

ಆದರೆ 3 ತಿಂಗಳಾದರೂ ಕೇಂದ್ರದಿಂದ ಹಣ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ಖಂಡಿಸಿ, ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.

ಆದರೂ ಕೇಂದ್ರ ಸರ್ಕಾರ ಬರ ಪರಿಹಾರ, ಕಾಮಗಾರಿಗಾಗಿ ಅನುದಾನ ಬಿಡುಗಡೆ ಮಾಡಲಿಲ್ಲ. ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಿತು.

Related Articles

Back to top button