ರಾಜಕೀಯ

ಕರ್ನಾಟಕ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಸೂರಜ್ ಹೆಗ್ಡೆ ನಿಧನ

Views: 27

ಕನ್ನಡ ಕರಾವಳಿ ಸುದ್ದಿ: ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ(50) ಭಾನುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಅವರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುಸಿಕೊಂಡಿದ್ದ ಅವರ ಅಗಲಿಕೆಗೆ ರಾಷ್ಟ್ರಮಟ್ಟದ ನಾಯಕರೊಂದಿಗೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ

ಹೃದಯಾಘಾತವಾದ ಕೂಡಲೇ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಸೂರಜ್ ಹೆಗ್ಡೆಯವರು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಮೊಮ್ಮಗನಾಗಿದ್ದರು. ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಿಎಂ ಡಿ.ಕೆ. ಶಿವಕುಮಾ‌ರ್ ಸೇರಿದಂತೆ ಹಲವು ಗಣ್ಯರು ಎಕ್ಸ್ ಮೂಲಕ ಸಂದೇಶ ಹಂಚಿಕೊಂಡಿದ್ದು, ಸೂರಜ್ ಹೆಗಡೆ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

 

Related Articles

Back to top button
error: Content is protected !!