ಶಿಕ್ಷಣ

ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆ:ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಪರೀಕ್ಷಿತ್ ಐತಾಳ್ ಜಿಲ್ಲಾ ಮಟ್ಟಕ್ಕೆ ಆಯ್ಕೆ 

Views: 86

ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ವಲಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಶಾಂತಿವನ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ಕುಂದಾಪುರದ ಕುಂದೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಇಂದು ಜರುಗಿದ ಕುಂದಾಪುರ ತಾಲೂಕು ಮಟ್ಟದ *ಜ್ಞಾನ ರಥ* ನೈತಿಕ ಮೌಲ್ಯಾಧಾರಿತ ಪುಸ್ತಕ ಆಧಾರಿತ ಶ್ಲೋಕ ಕಂಠಪಾಠ, ಚಿತ್ರಕಲೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ನಾಲ್ಕು ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಆರನೇ ತರಗತಿಯ ಪರೀಕ್ಷಿತ್ ಐತಾಳ್ ಜಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಈತ ಬಿದ್ಕಲ್ ಕಟ್ಟೆಯ ಮಹಾಲಕ್ಷ್ಮಿ-ಗಣಪತಿ ಐತಾಳ್ ದಂಪತಿಗಳ ಸುಪುತ್ರ. ಈ ಸ್ಪರ್ಧಾ ತಂಡದ ವ್ಯವಸ್ಥಾಪಕರಾಗಿ ಸಹ ಶಿಕ್ಷಕಿ ಚಿತ್ರಕುಮಾರಿ ಮಕ್ಕಳಿಗೆ ಮಾರ್ಗದರ್ಶನ ನೀಡಿರುತ್ತಾರೆ.

ಈ ವಿದ್ಯಾರ್ಥಿಯ ಸಾಧನೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕ ವೃಂದ, ಶಾಲಾ ಎಸ್ಡಿಎಂಸಿ ಹಾಗೂ ಹಳೆ ವಿದ್ಯಾರ್ಥಿ ಸಂಘದವರು ಶ್ಲಾಘಿಸಿದ್ದಾರೆ ಎಂದು ಶಾಲಾ ಪ್ರಕಟಣೆಯಿಂದ ತಿಳಿದು ಬಂದಿದೆ

Related Articles

Back to top button
error: Content is protected !!