ರಾಜಕೀಯ
ಕರ್ನಾಟಕ ವಿಧಾನ ಪರಿಷತ್ತಿಗೆ ಈ ನಾಲ್ವರ ನಾಮಕರಣ ಖಚಿತ?

Views: 114
ಕನ್ನಡ ಕರಾವಳಿ ಸುದ್ದಿ: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಗೆ ನಾಲ್ವರನ್ನು ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿದೆ. ತೀವ್ರ ಹಗ್ಗಜಗ್ಗಾಟದ ನಡುವೆಯೂ ನಾಲ್ವರ ನಾಮನಿರ್ದೇಶನಕ್ಕೆ ಕಾಂಗ್ರೆಸ್ ಹೈಕಮ್ಯಾಂಡ್ ನಿಂದ ಒಪ್ಪಿಗೆ ಸಿಕ್ಕಿದೆ.
ಹುಬ್ಬಳ್ಳಿ ಧಾರವಾಡದ ಕಾಂಗ್ರೆಸ್ ಪಕ್ಷದ ದಲಿತ ಮುಖಂಡ ಜಕ್ಕಪ್ಪರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿದೆ. ಇನ್ನೂ ಕಾಂಗ್ರೆಸ್ ನಿಂದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದ ಆರತಿ ಕೃಷ್ಣರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿದೆ. ಜೊತೆಗೆ ಕಾಂಗ್ರೆಸ್ ಮಾಧ್ಯಮ ವಕ್ತಾರ ರಮೇಶ್ ಬಾಬುಗೆ ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ನಾಮನಿರ್ದೇಶನ ಮಾಡಲಾಗುತ್ತಿದೆ. ಜೊತೆಗೆ ಮೈಸೂರಿನ ಪತ್ರಕರ್ತ ಶಿವಕುಮಾರ್ ರನ್ನು ವಿಧಾನ ಪರಿಷತ್ ಗೆ ನಾಮ ನಿರ್ದೇಶನ ಮಾಡಲಾಗುತ್ತಿದೆ.