ರಾಜಕೀಯ

ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಅಧಿಕೃತ ಶಾಲನೆ ನೀಡಿದ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ

Views: 0

ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಗೃಹ ಜ್ಯೋತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತವಾಗಿ ಚಾಲನೆ ನೀಡಿದರು.

ವೇದಿಕೆ ಮೇಲೆ 10 ಜನರಿಗೆ ಸಾಂಕೇತಿಕವಾಗಿ ಜೀರೊ ಬಿಲ್ ವಿತರಣೆ ಮಾಡುವ ಮೂಲಕ ಗ್ರಹ ಜ್ಯೋತಿ ಯೋಜನೆಗೆ ಚಾಲನೆ ನೀಡಲಾಯಿತು.

ಸಚಿವ ಕೆ.ಜೆ ಜಾರ್ಜ್ ಮಾತನಾಡಿ, 1 ಕೋಟಿ 42 ಲಕ್ಷ ಗೃಹಜ್ಯೋತಿ ನೋಂದಣಿ ಮಾಡಿಕೊಂಡಿದ್ದಾರೆ.ನೋಂದಾವಣೆಗೆ ಕಡೇ ದಿನಾಂಕ ಇರುವುದಿಲ್ಲ. ಜನರ ಆರ್ಥಿಕ ಸ್ಥಿತಿ ಸುಧಾರಿಸುವ ಕ್ರಮ ಇದಾಗಿದೆ ಎಂದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಕರ್ನಾಟಕದ ಗ್ಯಾರಂಟಿಗಳ ಬಗ್ಗೆ ದೇಶದ ಜನರೇ ಮಾತನಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ದಿವಾಳಿ ಆಗುತ್ತೆ ಅಂತ ಪ್ರಧಾನಿ ಮೋದಿ ಅಂತಾರೆ. ದೇವರು ವರವನ್ನು ಕೊಡುವುದಿಲ್ಲ ಶಾಪ ಕೊಡುವುದಿಲ್ಲ ಅವಕಾಶ ಮಾತ್ರ ಕೊಡುತ್ತಾನೆ ನಾವೀಗ ದುಡಿದಂತೆ ನಡೆಯುತ್ತಿದ್ದೇವೆ ಎಂದರು.

Related Articles

Back to top button
error: Content is protected !!