ರಾಜಕೀಯ
‘ಕಲೆಕ್ಷನ್ ಮಾಸ್ಟರ್’ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಎಡಿಟ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ಐಆರ್
ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ-ತೆರವು ಜಟಾಪಟಿ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಇತ್ತೀಚೆಗೆ ಎಫ್ಐಆರ್ ದಾಖಲಾಗಿತ್ತು. ಇದೀಗ ಕಲೆಕ್ಷನ್ ಮಾಸ್ಟರ್ ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಎಡಿಟ್ ಮಾಡಿ ಪೋಸ್ಟ್ ಮಾಡಿದಕ್ಕೆ ಮತ್ತೆ ಪುನಃ ಎಫ್ಐಆರ್ ದಾಖಲಾಗಿದೆ.

Views: 28
ಮಂಗಳೂರು: ಕಲೆಕ್ಷನ್ ಮಾಸ್ಟರ್ ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್ ಕುಕ್ಕೆಡಿ ನೀಡಿದ ಐಪಿಸಿ ಸೆಕ್ಷನ್ 1869 U/S 504, 505(2) ಅಡಿ ದೂರು ದಾಖಲಾಗಿತ್ತು.
ಸಿಎಂ ಕಚೇರಿ, ಗೃಹ ಕಚೇರಿ ಮತ್ತು ಸಿಎಂ ನಿವಾಸದ ಗೇಟ್ಗೆ ಕಲೆಕ್ಷನ್ ಮಾಸ್ಟರ್ ಎಂದು ಬೋರ್ಡ್ ಹಾಕಿರುವ ಫೋಟೋ ಎಡಿಟ್ ಮಾಡಿ ಶಾಸಕ ಹರೀಶ್ ಪೂಂಜ ಹೆಸರಿನ ಫೇಸ್ಬುಕ್ ಪೇಜ್ನಲ್ಲಿ ಪೋಸ್ಟ್ ಮಾಡಲಾಗಿತ್ತು.






